Thursday, September 9, 2010

ಗೌರಿ-ಗಣೇಶ ಹಬ್ಬದ ಶುಭಾಶಯಗಳು

ಪ್ರಿಯ ಓದುಗನ್,
ಆ ಪರಮಾತ್ಮನೆಂದು ಬಹು ಜನರಿಂದ ಕರೆಯಲ್ಪಡುವ ಗಣೇಶನು ಎಲ್ಲರಿಗೂ ಮಂಗಳವನ್ನುಂಟು ಮಾಡಲಿ ಎಂಬುದು ನನ್ನ ಹರಕೆ ಹಾರೈಕೆ. ಓದಿದ-ಕಾಮೆಂಟಿಸಿದ-ನೋಡಿದ ಎಲ್ಲರಿಗೂ ಗಣೇಶ ಹಬ್ಬದ ಶುಭಾಶಯಗಳು. ಈ ಗೌರಿ ಹೂವು ಅರಳಿ ನಿಂತಂತೆ ನಿಮ್ಮ ಬಾಳಿನ ಸಂತೋಷದ ಕ್ಷಣಗಳು ಅರಳಲಿ. ನಾನಂತೂ ವರ್ಷದಿಂದ ವರ್ಷಕ್ಕೆ ಗಣೇಶನಿಗೆ ಹತ್ತಿರವಾಗುತ್ತಿದ್ದೇನೆ. ಹೋದ್ವರ್ಷ ಚಿತ್ರವಿಚಿತ್ರವಾಗಿರುವ ಗಣನಾಯಕನ ಹೆಸರು ಪಠಿಸಿ ಸಹಸ್ರನಾಮಾವಳಿ ಮಾಡುವುದು ಕಷ್ಟ ಎನ್ನಿಸಿದ್ದರಿಂದ ಸಾವಿರ ಬಾರಿ ಗಣೇಶ ಗಣೇಶ ಗಣೇಶ ಅಂತ ಹೇಳಿ ಸಹಸ್ರನಾಮ ಪುಸ್ತಕ ಮುಚ್ಚಿಟ್ಟಿದ್ದೆ. ಈ ವರ್ಷ ಹೊಸ ಐಡಿಯಾ ಹೊಳೆದಿದೆ " ೧೦೦ಗಣೇಶ X ೧೦ ಗಣೇಶ" ಎಂದು ಒಂದು ಬಾರಿ ಹೇಳಿಬಿಡುತ್ತೇನೆ. ಅಲ್ಲಿಗೆ ಗಣಪತಿ ಸಹಸ್ರನಾಮ ಮುಗಿದಂತೆ. ಅವನು ಖಂಡಿತಾ ಖುಷ್ ಆಗುತ್ತಾನೆ ಅಂತ ಗೊತ್ತು ಕಾರಣ ತೇನವಿನಾ ತೃಣಮಪಿ ನಚಲತಿ, ಹಾಗಾದಮೇಲೆ ಇಂತಹ ಘನಂದಾರಿ ಐಡಿಯಾ ಅವನಿಂದಲೇ ವರಪ್ರಸಾದ ಅಲ್ಲವೇ. ಅದಾದಮೇಲೆ ಭಾನುವಾರ ಪಂಚಮಿ,ಚಕ್ಲಿ-ಕಡುಬು- ಕಜ್ಜಾಯದ ಊಟ ನಮ್ಮಮನೆಯಲ್ಲಿ ಇರುತ್ತದೆ, ಸಂಜೆ ಗಣಪತಿಯನ್ನು ಕೆರೆಗೆ ದುಡೂಂ ಮಾಡುವ ಪ್ರೋಗ್ರಾಂ ಇದೆ. ಸಂಜೆ ಡಂ ಡಂ ಕೂಡ ಇದೆ. ಎಲ್ಲರೂ ಬನ್ನಿ ಎನ್ನುತ್ತಾ...... ಮತೊಮ್ಮೆ ಗಣಪತಿ ಬಪ್ಪಾ ಮೋರಯಾ......

ವಿಸೂ: ಗೌರಿ ಗಣೇಶ ಹಬ್ಬದ ಪ್ರಯುಕ್ತ ಬ್ಲಾಗಿಂಗ್ ಗೆ ನಾಲ್ಕು ದಿನ ರಜೆ ಘೋಷಿಸಲಾಗಿದೆ

7 comments:

ಚುಕ್ಕಿಚಿತ್ತಾರ said...

ಎಲ್ಲರಿಗೂ ಗಣೇಶ ಚೌತಿಯ ಶುಭಾಶಯಗಳು.ಗಣೇಶ ಇನ್ನಶ್ಟು ಒಳ್ಳೊಳ್ಳೆಯ ಉಪಾಯಗಳನ್ನು ಕರುಣಿಸಲಿ.smart & short....!!!! :)

PARAANJAPE K.N. said...

ಶುಭಾಶಯ ಶರ್ಮರಿಗೆ ಮತ್ತು ಕುಟು೦ಬದ ಎಲ್ಲರಿಗೆ.

Unknown said...

ಗಣೇಶ ಚತುರ್ಥಿಯ ಹಾರ್ದಿಕ ಶುಭಾಶಯಗಳು ರಾಘವೇಂದ್ರರೇ

ಸಂದೀಪ್ ಕಾಮತ್ said...

ಸಕ್ಕತ್ ಐಡಿಯಾನೇ ಕೊಟ್ಟಿದ್ದಾನೆ ಗಣಪ!

nagarathna rajarama said...

channagiddu idea.happy ganesha chauti

g.mruthyunjaya said...

I'm missing.

ಸೀತಾರಾಮ. ಕೆ. / SITARAM.K said...

ತಮಗೂ ಹಬ್ಬದ ಶುಭಾಶಯಗಳು.