Wednesday, July 18, 2012

ಇನ್ನಷ್ಟು ನೆನಪಿಸಿದ್ದಾನೆ ಬರೆಯಬೇಕಿದೆ ಹೇಳಬೇಕಿದೆ

"ಜನರೂ ಹಾಗೆ, ಹಾಗಾಗಿಯೇ ಜನರೂ ಹೀಗೆ...
ಅಬ್ಬರ ಎಬ್ಬಿಸಿದವರಷ್ಟೇ ಕಾಣುವುದು ಇಲ್ಲಿ !"   -ವಿರಾಹೆ

ಹೀಗೊಂದು ಸಿಂಪಲ್ ಕಾಮೆಂಟ್ ಜಡಿದು ವಿರಾಹೆ ಅವನ ಡ್ಯೂಟಿಗೆ ಹೊರಟು ಹೋದ. ನನಗೆ ತಲೆ ಕೆರೆದುಕೊಳ್ಳುವುಂತಾಗುವುದು, ಮೈ ಪರಚಿಕೊಳ್ಳುವಂತಾಗುವುದು ಆವಾಗ. ನಾನು ಪ್ಯಾರಾಗಟ್ಟಲೆ ಕುಟ್ಟುತ್ತೇನೆ ನನ್ನೊಳಗಿನ ತುಮುಲವನ್ನು ನಿಮಗೆ ಅರ್ಥಮಾಡಿಸಲು. ನನಗಿಂತ ಇಪ್ಪತ್ತು ವರ್ಷ ಸಣ್ಣವ ಜಸ್ಟ್ ಒಂದೇ ಒಂದು ಸಾಲಿನಲ್ಲಿ ನಾನು ಹೇಳಬೇಕಾದ್ದನ್ನು ಹೇಳಿ ಹೋಗುತ್ತಾನೆ. ಛೆ ನಾನು ಯಾಕೆ ಹೀಗಲ್ಲ ಅಂತ ಅನ್ನಿಸುತ್ತದೆ. ಒಂದು ಸಾಲಿನಲ್ಲಿ ಹೇಳಬೇಕಾದ್ದಕ್ಕೆ ಪುಟಗಟ್ಟಲೆ.... ಹಾಗೆ ನನಗೆ ಒಂದು ಸಾಲಿನಲ್ಲಿ ಹೇಳಲು ಬಂದಿದ್ದರೆ ನಾನು ಝೆನ್ ಆಗಬಹುದಿತ್ತು. ಅದರ ಅರ್ಥ ಮಾಡಿಕೊಳ್ಳುವ ತಾಕತ್ತಂತು ನಿಮಗೆ ಇದ್ದೇ ಇದೆ. ಇಷ್ಟಾದಮೇಲೆ ನಾನೇಕೆ ಹಲುಬುತ್ತೇನೆ ಅಂತ ಅನ್ನಿಸಿ ಅನ್ನಿಸಿದರೂ ಮತ್ತೆ ಯಥಾಪ್ರಕಾರ ಅದಾಗದೆ ಕುಟ್ಟತೊಡಗುತ್ತೇನೆ ಈಗಿನಂತೆ. ಆಗಲಿ ಅದು ಅವನ ಶಕ್ತಿ ಇದು ನನ್ನ ನಿಶ್ಯಕ್ತಿ ಅಂತಲೂ ಅಂದು ಜೈ  ವಿರಾಹೆ ಅಂದು ಬಿಡೋಣ. ಇನ್ನಷ್ಟು ನೆನಪಿಸಿದ್ದಾನೆ ಬರೆಯಬೇಕಿದೆ ಹೇಳಬೇಕಿದೆ




3 comments:

ushodaya said...

nannadoo ade samasye sir.ondu vishayavannu saralavaagi bareyalu prayathnisuttene,aadare baredu mugisuvashtaralli dhaaraavaahi tara aagiruttade.vaasthavaamshada baraha....

RAMESHA HEGADE said...

avanu heliddu satya yaru abbara yebbisuttaro avaranna maatra e jana nenapu ittkollodu! yavaga avanu silent aadno avaka namma jana mart bittdtare! ivattina janakke memory power kammi.

ವಿ.ರಾ.ಹೆ. said...

ಬೈದಿದ್ದಾ? ಹೊಗಳಿದ್ದಾ? ತಿಳಿತಾ ಇಲ್ಲೆ ! :)