Friday, August 31, 2012

ಈ ಈಸ ರೈಸ್ ನಿಮಗೆ ನೆನಪಿರಲಿ.

ಅದೊಂತರ ವಿಚಿತ್ರ ಸ್ಟೇಟಸ್. ಗುಂಪಿನಲ್ಲಿದ್ದಾಗ ಟೂರ್ ಹೋದಾಗ ಕೆಲವರು ಸ್ವಲ್ಪ ವಿಚಿತ್ರವಾಗಿ ಆಡತೊಡಗುತ್ತಾರೆ. ಅದಕ್ಕೆ ನಾವು ಈಸ ರೈಸ್ ಅನ್ನುತ್ತೇವೆ(ಇದು ನಮ್ಮ ವೈಯಕ್ತಿಕ ಪದ) ಒಟ್ಟಿನಲ್ಲಿ ಗುಂಪಿನಲ್ಲಿರುವವರಿಗಿಂತ ನಾವು ಬೇರೆ ಅಂತ ತೋರಿಸಿಕೊಳ್ಳುವ ಹಂಬಲದ ವರ್ತನೆ ಅದು. ಸಹಜ ಸ್ಥಿತಿಗಿಂತ ಮೇಲಿನ ಅವಸ್ಥೆ ಆಗಿದ್ದಕ್ಕೆ "ರೈಸ್" ಅನ್ನುವ ಪದ ಪ್ರಯೋಗ ಅಲ್ಲಿ ಅಷ್ಟೆ. ಈ ಈಸ ರೈಸ್ ಸ್ಥಿತಿ ಇದೆಯಲ್ಲಾ ಅದು ಜೀವ ಕಳೆದುಕೊಳ್ಳುವ ಮಟ್ಟಕ್ಕೆ ಹೋದ ಉದಾಹರಣೆ ಇದೆ. ಹೀರೋ ಆಗಲು ಹೋಗಿ ಝೀರೋ ಆಗುವ ಸ್ಥಿತಿ ಅದು. ಜೋಗ ಬ್ರಿಟೀಷ್ ಬಂಗ್ಲೆಯ ನೋಟದಲ್ಲಿ ಒಂದು ನುಣುಪಾದ ಬಂಡೆಯಿದೆ. ಅಲ್ಲಿ ಅಪಾಯ ಅಪಾಯ ಅಪಾಯ ಅಂತ ಎಲ್ಲರೂ ಹಲುಬುತ್ತಿರುತ್ತಾರೆ. ಇಷ್ಟಾದರೂ ಅಲ್ಲಿ ವರ್ಷಕ್ಕೆ ೩-೪ ಶೀಟಿ ಕೇಸ್ ನಡೆಯುತ್ತಲಿರುತ್ತದೆ. ಅದಕ್ಕೆ ಗುಂಪಿನಲ್ಲಿ ಬಂದಾಗ ಈಸ ರೈಸ್ ಆಗುವ ಸ್ಥಿತಿಯೇ ಕಾರಣ. ಈ ಚಿತ್ರದಲ್ಲಿ ನೋಡಿ ಜಿಟಿಜಿಟಿ ಮಳೆಯ ನಡುವೆ ಇವರದೆಂತಾ ಹುಚ್ಚಾಟ ಅಂತ. ಹಾಗಂತ ಹೀಗೆ ನೋಡಿ ಬಚಾವಾಗಿ ಹೋದವರ ಸಂಖ್ಯೆ ಬಹಳ ದೊಡ್ಡದಿದೆ. ಆದರೆ ಆ ಬಚಾವಾದವರು ಹುಚ್ಚಾಟ ಮಾಡಲು ಹೋಗಿರುವುದಿಲ್ಲ ಅಂತಲಾದರೂ ಅನ್ನಬಹುದು ಅಥವಾ ಮಾರನೇ ದಿವಸದ ಪತ್ರಿಕೆಯವರಿಗೆ ನಸೀಬು ಕೊಟ್ಟಿ  ಇತ್ತು ಅಂತಲಾದರೂ ಅನ್ನಬಹುದು. ಆದರೂ ಹುಷಾರು ತಪ್ಪಬಾರದು. ಬಿದ್ದರೂ ಈಸ ರೈಸ್ ಆಗಿ ಬೀಳಬಾರದು. ಹಾಗಾಗಿ ಟೂರ್ ಹೋದಾಗ ಈ ಈಸ ರೈಸ್ ನಿಮಗೆ ನೆನಪಿರಲಿ.

5 comments:

  1. ಹಹಹ "ಈಸ ರೈಸ್" ಇದು ನಿಮ್ಮಿಂಲೇ ಆವಿಶ್ಕರಿಸಲ್ಪಟ್ಟ ಶಬ್ದ ನಮ್ಮ ಬಳಗದಲ್ಲಿ ಬಳಸಲ್ಪಡುವುದಲ್ಲದೆ ದೇಶ ವಿದೇಶ ಗಳಲ್ಲಿಯೂ ಜನಜನಿತ ವಾಗಿದೆ. ಇಲ್ಲಿ ತಮಿಳನಾದ ನಮ್ಮ ಸ್ನೇಹಿತನ ೫ ವರ್ಷದ ಮಗ ಈಸ ರೈಸ್ ಎನ್ನುವ ಶಬ್ದವನ್ನ ಬಳಸುವುದುಂಟು.

    ReplyDelete
  2. ತ್ಯಾಂಕ್ಸ್ ದಿನಕರ್

    ನಾಣು
    ಹೊಡ್ತ ಹೊಡಿಯಾ, ಈಸ ನ ಅದೃಷ್ಟ ನೋಡು. ವಿದೇಶಿ ಯೋಗ.

    ReplyDelete
  3. ha ha ha :D super idu eesa rise bahala jagath kyathiyannu hondida word what a gr8 invention raghu mava ninage shashtanga namaskara :)

    ReplyDelete
  4. ROFL, :) I am sure this word will make to Oxford dictionary soon :D hahaha

    ReplyDelete

Thank you